ಬೆಂಗಳೂರು : ರಾಜ್ಯದಲ್ಲಿ ಇನ್ನೆರಡು ತಿಂಗಳು ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಲಿದ್ದು, ಮೇ ಅಂತ್ಯದವರೆಗೆ ಕೋವಿಡ್ ಸ್ಫೋಟವಾಗಲಿದೆ. ಅದರಿಂದ ಜನರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದಾರೆ. ಕೇಂದ್ರದಿಂದ 15 ಲಕ್ಷಕ್ಕೂ ಹೆಚ್ಚು ಲಸಿಕೆ ಕಳಿಸಿದ್ದಾರೆ. 10 ಲಕ್ಷ ಬೆಂಗಳೂರಿಗೆ, 5 ಲಕ್ಷ ಬೆಳಗಾವಿಗೆ ಕಳಿಸಿದ್ದಾರೆ.
ಬೆಂಗಳೂರಿನಲ್ಲಿ ಸ್ವಲ್ಪ ಸೋಂಕು ಕಡಿಮೆಯಾಗಿದೆ. ನಿನ್ನೆ ಪ್ರಧಾನಿ ಕೂಡ ಎಂಟು ರಾಜ್ಯಗಳ ಜೊತೆ ಸಮಾಲೋಚನೆ ಮಾಡಿದ್ದು, ಆಯಾ ರಾಜ್ಯಸರ್ಕಾರಗಳಿಗೆ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿ ನೀಡಿದ್ದಾರೆ. ಸೋಂಕು ಜಾಸ್ತಿಯಾದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಅಂತ ಸೂಚಿಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ನಲ್ಲಿ ಬೆಡ್ಗಳನ್ನು ಹೆಚ್ಚು ಮಾಡಬೇಕು. ಇನ್ನು ಬೆಡ್ಗಳು ಪೂರ್ಣವಾಗಿಲ್ಲ, ಖಾಸಗಿ ಆಸ್ಪತ್ರೆಯೊಂದಿಗೂ ಶೇ. 20ರಷ್ಟು ಮೀಸಲಿಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಚಿತ್ರಮಂದಿರಗಳಿಗೆ ಶೇ.100ರಷ್ಟು ಪ್ರೇಕ್ಷಕರಿಗೆ ಮುಖ್ಯಮಂತ್ರಿಗಳು ಅವಕಾಶ ನೀಡಿದ್ದಾರೆ. ಸಿನಿಮಾ ಟಿಕೆಟ್ ಅಡ್ವಾನ್ಸ್ ಬುಕ್ ಆಗಿರುವ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ. ಮಾನವೀಯ ದೃಷ್ಟಿಯಿಂದ ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.
C News TV Kannada News Online in cnewstv