ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2 ನೇ ಅಲೆಯ ಸ್ಫೋಟ ಮುಂದುವರೆದಿದ್ದು, ಈ ಹಿನ್ನೆಲೆ ಬೆಂಗಳೂರು, ದಕ್ಸಿಣ ಕನ್ನಡ ಸೇರಿದಂತೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶನಿವಾರದಿಂದ 10 ದಿನಗಳ ಕಾಲ ‘ನೈಟ್ ಕರ್ಪ್ಯೂ’ ಜಾರಿಗೊಳಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ, ಉಡುಪಿ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್ , ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಪ್ಯೂ ಶನಿವಾರದಿಂದ ಜಾರಿಗೊಳಿಸುವಂತೆ ಸಿಎಂ ಆದೇಶ ಹೊರಡಿಸಿದ್ದಾರೆ.
ಪಿಎಂ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸಿದ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ರು. ಈ ಸಂದರ್ಭದಲ್ಲಿ ರಾಜ್ಯಗಳಲ್ಲಿ ಕೊರೊನಾ ಕರ್ಫ್ಯೂ ಪ್ರಧಾನಿ ಮೋದಿ ಬೆಂಬಲ ನೀಡಿದ್ದು, ರಾತ್ರಿ 9 ಗಂಟೆಗೆ ‘ಕೊರೊನಾ ಕರ್ಫ್ಯೂ’ ಪ್ರಾರಂಭವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು.
Recent Comments