ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರವಾಗಿ ಬುಧವಾರದಿಂದ ಎರಡು ದಿನ ಅಬ್ಬರ ಪ್ರಚಾರ ನಡೆಸಿದ್ದರು. ಈ ವೇಳೆ ಅವರು 99 ಡಿಗ್ರಿ ಜ್ವರದಿಂದ ಬಳಲುತ್ತಿದ್ದರು. ಈ ಜ್ವರದ ನಡುವೆಯೂ ರೋಡ್ ಶೋ, ಸಮಾವೇಶದಲ್ಲಿ ಮತಪ್ರಚಾರ ನಡೆಸಿದ್ದರು. ಜ್ವರ ತಗ್ಗದ ಹಿನ್ನೆಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಗೆ ಹೋಗಿದ್ದರು, ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಕಾರಣದಿಂದ ಮುಖ್ಯಮಂತ್ರಿಗಳನ್ನು ಮಣಿಪಾಲ್ ಆಸ್ಪತ್ರೆ ಗೆ ಶಿಪ್ಟ್ ಮಾಡಲಾಗಿದೆ.

ಸಿಎಂ ಯಡಿಯೂರಪ್ಪ ಅವರಿಗೆ ಕಳೆದ ವರ್ಷವೂ ಕೋವಿಡ್ ಪಾಸಿಟಿವ್ ಆಗಿತ್ತು. ಆಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇದೀಗ ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಆಗಿದೆ.
ಸಿಎಂ ಬಿಎಸ್ ಯಡಿಯೂರಪ್ಪ ಕೋವಿಡ್ ಲಸಿಕೆಯ ಮೊದಲ ಡೋಸ್ ಅನ್ನು ಮಾರ್ಚ್ 12 ರಂದು ಪಡೆದಿದ್ದರು. ಈ ವಾರ ಎರಡನೇ ಡೋಸ್ ಲಸಿಕೆ ಪಡೆಯಬೇಕಿತ್ತು.
C News TV Kannada News Online in cnewstv