ಶಿವಮೊಗ್ಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜಿಕ ಅಂತರವನ್ನ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸರ್ಕಾರದ ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಏಪ್ರಿಲ್ 19ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದೆ ಕಾನೂನು ಉಲ್ಲಂಘನೆ ಮಾಡಿರುವವರ ವಿರುದ್ಧ ಪೊಲೀಸ್ ಇಲಾಖೆ ವತಿಯಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 1166 ಪ್ರಕರಣಗಳು ದಾಖಲಾಗಿದೆ. 1,60,450 ರೂಪಾಯಿಗಳ ದಂಡವನ್ನು ವಿಧಿಸಲಾಗಿದೆ..
Recent Comments