Cnewstv.in / Shivamogga / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕೊರೊನಾ ನಿಯಂತ್ರಣಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಕೊರೊನಾ ಪಾಸಿಟಿವ್ ಬಂದ ವ್ಯಕ್ತಿ ಖಾಸಗಿ ವಾಹನಗಳಲ್ಲಿ ಹೋಗುವಂತಿಲ್ಲ. ಒಂದು ವೇಳೆ ಖಾಸಗಿ ವಾಹನ ಬಳಕೆ ಮಾಡಿದರೆ ಅಂತಹ ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ.
ಪಾಸಿಟಿವ್ ವರದಿ ಬಂದ ತಕ್ಷಣ ಆಂಬುಲೆನ್ಸ್‍ನಲ್ಲಿ ಕೋವಿಡ್ ಕೇರ್ ಸೆಂಟರ್‍ಗೆ ಕಳುಹಿಸಲಾಗುತ್ತದೆ. ಮೂರು ದಿನ ಅಲ್ಲಿರಬೇಕು. ಆರೋಗ್ಯ ಪರಿಶೀಲನೆ ಬಳಿಕ ಸುಧಾರಣೆ ಕಂಡು ಬಂದರೆ ಹೋಂ ಐಸೊಲೇಷನ್‍ಗೆ ಕಳುಹಿಸಲಾಗುತ್ತದೆ. ಇಲ್ಲದಿದ್ದರೆ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗುತ್ತದೆ.ಗಂಭೀರ ಸ್ಥಿತಿಯಲ್ಲಿರುವವರಿಗೆ ಮೊದಲ ಆದ್ಯತೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv