ಶಿವಮೊಗ್ಗ : “ಬೆಡ್ ಖಾಲಿ ಇಲ್ಲ, ಆಕ್ಸಿಜನ್ ಇಲ್ಲ” ಎಂಬುದನ್ನು ಇಷ್ಟು ದಿನ ನಾವು ರಾಜ್ಯಧಾನಿ ಬೆಂಗಳೂರಿನಲ್ಲಿ ಕೇಳುತಿತ್ತು. ಆದ್ರೆ ಇದೀಗ ಈ ಪರಿಸ್ಥಿತಿ ನಮ್ಮ ಶಿವಮೊಗ್ಗ ಜಿಲ್ಲೆಯ ಬರ್ತಾಯಿದೆ. ಹೌದು ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಗಳ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಆಕ್ಸಿಜನ್ ಬೆಡ್ ಖಾಲಿ ಇಲ್ಲ, ಸಹಕರಿಸಿ ಎಂಬ ಬೋರ್ಡ್ ಹಾಕಲಾಗಿದೆ.
ಜಿಲ್ಲೆಯಲ್ಲಿ ಬೆಡ್ ಸಮಸ್ಯೆ ಇಲ್ಲ ಎಂದು ಜಿಲ್ಲಾಡಳಿತ, ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್ ಈಶ್ವರಪ್ಪನವರು ಹೇಳುತ್ತಿದ್ದರು. ಆದರೆ ಆಕ್ಸಿಜನ್ ಬೆಡ್ ಕೊರತೆ ಎಂದು ಆಸ್ಪತ್ರೆ ಮುಂದೆ ಬೋರ್ಡ್ ಹಾಕಿರುವುದು ಸೋಂಕಿತರಲ್ಲಿ ಆತಂಕ ಮೂಡಿಸಿದೆ.
ಶಿವಮೊಗ್ಗ ಮಾತ್ರವಲ್ಲದೇ ಮೆಗ್ಗಾನ್ ಗೆ ನೆರೆಯ ಜಿಲ್ಲೆಗಳಿಂದ ಕೂಡ ಜನ ಚಿಕಿತ್ಸೆಗಾಗಿ ಆಗಮಿಸುತ್ತಿದ್ದಾರೆ. ಆದರೆ, ಈಗ ಆಕ್ಸಿಜನ್ ಬೆಡ್ ಲಭ್ಯವಿಲ್ಲದ ವಿಚಾರ ಸೋಂಕಿತರನ್ನು ಆತಂಕಕ್ಕೀಡು ಮಾಡಿದೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ 400 ಆಕ್ಸಿಜನ್ ಬೆಡ್‌ಗಳಿವೆ. ಅದರೆ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುದರಿಂದ ಬೆಡ್‌ಗಳು ಭರ್ತಿಯಾಗಿದ್ದು, ಆತಂಕ ಮೂಡಿಸಿದೆ. ಉಸಿರಾಟದ ಸಮಸ್ಯೆ ಮತ್ತು ಆಕ್ಸಿಜನ್ ತುರ್ತು ಅಗತ್ಯವಿರುವ ಕೋವಿಡ್ ಸೋಂಕಿತರಿಗೆ ಬೆಡ್ ಸಿಗದೆ ಪರಿತಪಿಸುವಂತಾಗಿದೆ.
C News TV Kannada News Online in cnewstv