Cnewstv.in / Shivamogga / 11.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಗುರುವಾರ, ಶುಕ್ರವಾರ ,ಶನಿವಾರ ಮತ್ತುಭಾನುವಾರಗಳಂದು ಸಂಪೂರ್ಣ ಲಾಕ್‍ಡೌನ್ ಮಾಡಲಾಗುವುದು. ಉಳಿದ ಮೂರು ದಿನಗಳೂ ಜನತಾ ಕಫ್ರ್ಯೂ ಮುಂದುವರಿಯಲಿದೆ.
ನಾಲ್ಕುದಿನಗಳ ಸಂಪೂರ್ಣ ಲಾಕ್ ಡೌನ್‍ನಲ್ಲಿ ದಿನಸಿ ಅಂಗಡಿ, ಮಾರ್ಕೆಟ್, ಹೋಲ್ ಸೇಲ್ ವ್ಯಾಪಾರ ಯಾವುದೂ ಇರುವುದಿಲ್ಲ. ಜನರು ಮನೆಯಿಂದ ಹೊರಗೆ ಬರದಂತೆ ಸೂಚನೆ ನೀಡಲಾಗುವುದು. ಎಪಿಎಂಸಿ, ಕೈಗಾರಿಕೆಗಳು ಸಂಪೂರ್ಣವಾಗಿ ಬಂದ್, ಹೊಟೇಲ್‌ನಲ್ಲಿ ಪಾರ್ಸಲ್‌ಗೆ ಮಾತ್ರ ಅನುಮತಿ ನೀಡಲಾಗಿದೆ.ಬೆಂಗಳೂರು ಸೇರಿದಂತೆ ಹೊರ ಊರಿನಿಂದ ಬರಲು ಅವಕಾಶವಿಲ್ಲ.ಸ್ಥಳೀಯವಾಗಿ ದಿನಸಿ, ತರಕಾರಿ ಅಂಗಡಿಗಳಿರುತ್ತವೆ. ವಾಹನಗಳ ಬಳಕೆಯನ್ನೂ ಸಂಪೂರ್ಣವಾಗಿ ನಿಷೇಧಸಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments