Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಪ್ರತಿದಿನ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದರಿಂದ ವೈದ್ಯರ ಹಾಗೂ ಆಸ್ಪತ್ರೆಯ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಇದನ್ನು ಸಮರ್ಥವಾಗಿ ನಿರ್ವಹಿಸುವ ದೃಷ್ಟಿಯಿಂದ ಶಿವಮೊಗ್ಗದ ಪ್ರತಿಷ್ಠಿತ ಶುಭಮಂಗಳ ಕಲ್ಯಾಣ ಮಂಟಪವನ್ನು ಕೇವಿಡ್ ಕೇರ್ ಸೆಂಟರ್ ಅಗಿ ಮಾಡಲು ಸಚಿವ ಈಶ್ವರಪ್ಪ ಮುಂದಾಗಿದ್ದಾರೆ.
ಕೋವಿಡ್ ಸುರಕ್ಷಾ ಪಡೆ ಹಾಗೂ ಸೇವಾಭಾರತಿ ಕರ್ನಾಟಕ ಸಂಘದ ವತಿಯಿಂದ 100 ಹಾಸಿಗೆಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಆಕ್ಸಿಜನ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒಳಗೊಂಡಿದೆ. ಇದೇ ಗುರುವಾರದಿಂದ ಕೋವಿಡ್ ಕೇರ್ ಸೆಂಟರ್ ಅನ್ನು ಆರಂಭಿಸಲಾಗುವುದು ಎಂದು ಸಚಿವ ಈಶ್ವರಪ್ಪ ನವರು ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv