Cnewstv.in / Shivamogga / 17.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಕಳೆದ ವಾರ ನಾಲ್ಕು ದಿನಗಳ ಕಾಲ ಜಾರಿಗೊಳಿಸಲಾಗಿದ್ದ ಬಿಗಿ ಲಾಕ್‍ಡೌನ್ ಭಾನುವಾರದ ತನಕ ಮುಂದುವರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.
ಕಳೆದ ವಾರದ ಲಾಕ್‍ಡೌನ್ ಬಿಗಿಗೊಳಿಸಿರುವ ಹಿನ್ನೆಲೆಯಲ್ಲಿ ಕೋವಿಡ್ ಹರಡುವಿಕೆ ಪ್ರಮಾಣ ಸ್ವಲ್ಪಮಟ್ಟಿಗೆ ನಿಯಂತ್ರಣಕ್ಕೆ ಬಂದಿದ್ದು, ಎಲ್ಲರ ಅಭಿಪ್ರಾಯದಂತೆ ಇದನ್ನು ಒಂದು ವಾರ ಕಾಲ ಮುಂದುವರೆಸಲಾಗುವುದು. ಆದರೆ ಈ ಬಾರಿ ಎಪಿಎಂಸಿ ಮಾರುಕಟ್ಟೆ ಬೆಳಿಗ್ಗೆ 7ಗಂಟೆಯವರೆಗೆ ಹಾಗೂ ಸಗಟು ದಿನಸಿ ವ್ಯಾಪಾರಕ್ಕೆ ಬೆಳಿಗ್ಗೆ 9ಗಂಟೆಯವರೆಗೆ ಅವಕಾಶ ನೀಡಲಾಗುವುದು. ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅವಶ್ಯಕ ವಸ್ತುಗಳು ಹಾಗೂ ಕೈಗಾರಿಕೆಗಳಿಗೆ ಅನುಮತಿಯನ್ನು ನೀಡಲಾಗಿದೆ ಎಂದು ಹೇಳಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv