Cnewstv.in / Shivamogga / 21.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಮೇ 22 ಮತ್ತು 23ರಂದು ಭದ್ರಾವತಿ ತಾಲೂಕನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಭದ್ರಾವತಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಮೇ 18ರಂದು 164, 19ರಂದು 133, ಮೇ 20ರಂದು 207 ಮಂದಿಗೆ ಪಾಸಿಟಿವ್ ಬಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿರುವುದರಿಂದ ಭದ್ರಾವತಿ ತಾಲೂಕನ್ನು 2 ದಿನ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ.
ಹಾಲು ಮತ್ತು ಮೆಡಿಕಲ್ ಶಾಪ್ ಹೊರತುಪಡಿಸಿ ಬೇರಾವುದೆ ಅಂಗಡಿಗಳನ್ನು ತೆಗೆಯುವಂತಿಲ್ಲ ಎಂದು ತಹಶೀಲ್ದರ್ ಜಿ.ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಜನರು ಅನಗತ್ಯವಾಗಿ ಸಂಚರಿಸುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಮನೆಯಲ್ಲಿ ಇದ್ದು ಲಾಕ್ ಡೌನ್‍ಗೆ ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ಮನವಿಯಲ್ಲಿ ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv