Cnewstv.in / Shivamogga / 22.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪರವರು, ನಾನು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕನಾಗಿದ್ದಾಗ ರಾಜ್ಯದಲ್ಲಿದ್ದ ಬರಗಾಲ ಪರಿಸ್ಥಿತಿಯನ್ನು ಚರ್ಚಿಸಲು ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಮಾಡಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೆ ನನಗೆ ಆಗ ಎಲ್ಲಾ ಜಿಲ್ಲಾಧಿಕಾರಿಗಳು ಹೇಳಿದ್ದು ಒಂದೇ ಉತ್ತರ ನೀವು ವಿರೋಧ ಪಕ್ಷದ ನಾಯಕರಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲು ಸರ್ಕಾರದಿಂದ ಅನುಮತಿ ಇಲ್ಲ ಈ ಕುರಿತು ಸರ್ಕಾರದ ಆದೇಶವಿದೆ. ಆಗ ತಾವೇ ಈ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಸಮಯ ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನುಮತಿ ನೀಡಬೇಕೆಂದು ನಾನು ನಿಮಗೆ ಪತ್ರವನ್ನು ಸಹ ಬರೆದೆ, ನಿಮ್ಮಿಂದ ಅದಕ್ಕೆ ಯಾವ ಉತ್ತರವೂ ಬರಲಿಲ್ಲ ಎಂದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv