Breaking News

ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕರೋನಾ ವಾರಿಯರ್ಸ್

 

Cnewstv.in / Shivamogga / 26.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕರೋನಾ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಇಂದು ಮುಖ್ಯಮಂತ್ರಿ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಅವರು 4ಜಿಲ್ಲೆಗಳ 40 ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಗ್ರಾಮೀಣ ಭಾಗದಲ್ಲಿನ ಕರೋನಾ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಕರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕರೋನಾ ಪಾಸಿಟಿವಿ ದರವನ್ನು ಇನ್ನಷ್ಟು ತಗ್ಗಿಸಲು ಕಠಿಣ ಕ್ರಮಗಳನ್ನು ಮುಂದುವರೆಸಲು ಸೂಚನೆ ನೀಡಿದ್ದಾರೆ ಎಂದರು.

ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಪ್ರಮಾಣವನ್ನು ಗಮನದಲ್ಲಿರಿಸಿ ಆಯಾ ಗ್ರಾಮ ಪಂಚಾಯತ್ ಮಟ್ಟದಲ್ಲೂ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸೂಚನೆ ನೀಡಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 17 ಕೋವಿಡ್ ಕೇರ್ ಸೆಂಟರ್‍ಗಳು ಕಾರ್ಯ ನಿರ್ವಹಿಸುತ್ತಿವೆ. ಕರೋನಾ ಪಾಸಿಟಿವ್ ವ್ಯಕ್ತಿಗಳು ಕಡ್ಡಾಯವಾಗಿ ಕೇರ್ ಸೆಂಟರ್‍ನಲ್ಲಿ ದಾಖಲಾಗಲು ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕು ಹೋಂ ಐಸೋಲೇಷನ್‍ಗೆ ಅನುಮತಿ ನೀಡದಿರುವಂತೆ ತಿಳಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ತಲಾ ನಾಲ್ಕು ವಾರ್ಡ್‍ಗಳಿಗೆ ಒಂದರಂತೆ ಒಟ್ಟು 9 ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಆಯಾ ಭಾಗದ ಕಾರ್ಪೊರೇಟರ್‍ಗಳು ಜವಾಬ್ದಾರಿ ತೆಗೆದುಕೊಂಡು ಸ್ವಚ್ಛತೆ ಇತ್ಯಾದಿ ಕಾರ್ಯಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*