Cnewstv.in / Shivamogga / 28.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕರೋನಾ ಪ್ರಕರಣಗಳು 10ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್‌ಮೆAಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.
ಇಂದು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕರೋನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಪರಿಶೀಲನೆ ನಡೆಸಿದರು.
ಕಂಟೈನ್‌ಮೆAಟ್ ಪ್ರದೇಶದ ಪ್ರತಿ ಮನೆಗಳಿಗೆ ಆಶಾ ಕಾರ್ಯಕರ್ತೆಯರು ಪ್ರತಿದಿನ ಭೇಟಿ ನೀಡಿ ಆರೋಗ್ಯ ಸ್ಥಿತಿಗತಿ ಪರಿಶೀಲನೆ ನಡೆಸಬೇಕು. ರೋಗ ಲಕ್ಷಣವಿರುವ ಪ್ರತಿಯೊಬ್ಬರಿಗೂ ಕರೋನಾ ಪರೀಕ್ಷೆಯನ್ನು ನಡೆಸಲು ಕ್ರಮ ಕೈಗೊಳ್ಳಬೇಕು. ಅಗತ್ಯ ಸಾಮಾಗ್ರಿಗಳನ್ನು ಅಗತ್ಯವಿರುವವರಿಗೆ ಮನೆಯ ಬಾಗಿಲಿಗೆ ತಲುಪಿಸಬೇಕು. ಕಂಟೈನ್‌ಮೆAಟ್ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ನಿಗಾ ಇರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಬೇಕು. ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ಮೊಬೈಲ್‌ನಲ್ಲಿ ಛಾಯಾಚಿತ್ರ ಅಥವಾ ವಿಡಿಯೋ ತೆಗೆದು ಪೊಲೀಸರಿಗೆ ದೂರು ನೀಡಬೇಕು ಎಂದು ಹೇಳಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments