Breaking News

ಕಲಾವಿದರಿಂದ ಅರ್ಜಿ ಆಹ್ವಾನ

 

Cnewstv.in / Shivamogga / 28.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕಲಾವಿದರಿಗೆ ರೂ.3ಸಾವಿರ ನೆರವು ನೀಡುವ ಯೋಜನೆಯಡಿ ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಸೇವಾ ಸಿಂಧು ಪೋರ್ಟಲ್ ಮೂಲಕ ಜೂನ್ 5ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಕಲಾವಿದರು ವೃತ್ತಿನಿರತರಾಗಿದ್ದು, 35ವರ್ಷ ಮೇಲ್ಪಟ್ಟವರಾಗಿರಬೇಕು. ಕಲಾಸೇವೆಯ ಕನಿಷ್ಟ ಒಂದು ಫೋಟೊ ಲಗತ್ತಿಸಬೇಕು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು. ಯಾವುದೇ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಸಂಸ್ಥೆಗಳಲ್ಲಿ ನೌಕರನಾಗಿರಬಾರದು. 2020-21ನೇ ಸಾಲಿನಲ್ಲಿ ಇಲಾಖೆಯಿಂದ ಯಾವುದೇ ರೀತಿಯ ಧನ ಸಹಾಯ ಪಡೆದಿರಬಾರದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-223354 ಅಥವಾ dkc.shivamogga@gmail.com ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರಾದ ಉಮೇಶ್ ಅವರು ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*