Breaking News

ಶಿವಮೊಗ್ಗ ನಗರದ ಹೊಸ ಬಡಾವಣೆಗಳಿಗೆ 96ಕೋಟಿ ರೂ. ವೆಚ್ಚದಲ್ಲಿ ನೀರು ಸರಬರಾಜು ಯೋಜನೆಗೆ ಅನುಮೋದನೆ: ಸಚಿವ ಕೆ.ಎಸ್.ಈಶ್ವರಪ್ಪ

Cnewstv.in / Shivamogga / 28.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿವಮೊಗ್ಗ ನಗರದ ಹೊರ ಭಾಗದ ಹೊಸ ಬಡಾವಣೆಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲು 96.50ಕೋಟಿ ರೂ. ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಗಾಜನೂರು ಅಣೆಕಟ್ಟಿನಿಂದ ಶಿವಮೊಗ್ಗ ನಗರದ ಪ್ರತಿ ಮನೆಗೆ ನೀರು ಸರಬರಾಜು ಮಾಡುವ 130.70 ಕೋಟಿ ರೂ. ವೆಚ್ಚದ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ. ಶೇ.55ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಶಿವಮೊಗ್ಗ ನಗರದ ಹೊರಭಾಗದ ಕೆಲವು ಮಂಡಲ ಪಂಚಾಯತ್ ವ್ಯಾಪ್ತಿಯ ಪ್ರದೇಶಗಳು ಹಾಗೂ ನಿರ್ಮಾಣಗೊಂಡಿರುವ ಹೊಸ ವಸತಿ ಬಡಾವಣೆಗಳಿಗೆ ನೀರು ಪೂರೈಕೆ ಮಾಡಲು 96.50ಕೋಟಿ ರೂ. ಯೋಜನೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಇದಕ್ಕೆ ಸಂಪುಟದ ಅನುಮೋದನೆ ದೊರೆತಿದ್ದು, ಆದಷ್ಟು ಬೇಗನೇ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*