Cnewstv.in / Shivamogga / 28.05.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿನಿಂದ ಬಹಳಷ್ಟು ಜನ ಸಾವನ್ನಪ್ಪುತ್ತಿದ್ದು ಅಂತಹ ಮೃತ ದೇಹಗಳನ್ನು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ವಾರ್ಡ್ ನಂ 14 ರ ರಾಜೀವ್ ಗಾಂಧಿ ಬಡಾವಣೆಯ ಸಮೀಪದಲ್ಲಿನ ಪಾಲಿಕೆಯ ವತಿಯಿಂದ ನಿರ್ವಹಿಸುತ್ತಿರುವ ಅನಿಲ ಚಿತಾಗಾರದಲ್ಲಿ ಶವ ದಹನ ಕ್ರಿಯೆಯನ್ನು ನಡೆಸಲಾಗುತ್ತಿದೆ.
ಕೊರೊನಾ ಸೊಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಆರ್ಥಿಕ ಹೊರೆಯನ್ನು ತಪ್ಪಿಸುವ ದೃಷ್ಟಿಯಿಂದ ಅನಿಲ ಚಿತಾಗಾರದಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಶವಗಳ ದಹನ ಕ್ರಿಯೆಯ ಶುಲ್ಕ ಪಾವತಿಯನ್ನು ಇಂದಿನಿಂದ 31ನೇ ಜುಲೈ – 2021 ರ ಅಂತ್ಯದವರೆಗೆ ಸಂಪೂರ್ಣ ವಿನಾಯಿತಿ ನೀಡಲಾಗಿರುತ್ತದೆ ಎಂದು ಮಹಾನಗರಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments