Cnewstv.in / 04.06.2021 / Bangalore / contact for information 9916660399
ಬೆಂಗಳೂರು : ಜುಲೈ ಮೂರನೇ ವಾರದಲ್ಲಿ SSLC ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಈ ಬಾರಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಗ್ರೇಡಿಂಗ್ ಆಧಾರದ ಮೇಲೆ ನೀಡಲಾಗುವುದು. ಕೊವೀಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದೇ ಇದ್ದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ.
ಬಹು ಆಯ್ಕೆಯ ಪ್ರಶ್ನೆ ಪತ್ರಿಕೆಗಳ ಮೂಲಕ ಪರೀಕ್ಷೆ ನಡೆಸಲಾಗುವುದು. ಪ್ರಥಮ ದ್ವಿತೀಯ ತೃತೀಯ ಭಾಷೆಗೆ ಒಂದು ಪರೀಕ್ಷೆ ನಡೆಯಲಿದ್ದು, ಗಣಿತ, ವಿಜ್ಞಾನ, ಸಮಾಜ ವಿಜ್ಞಾನಕ್ಕೆ ಒಂದು ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷಾ ಕೇಂದ್ರಗಳನ್ನು ದುಪ್ಪಟ್ಟು ಗೊಳಿಸಲಾಗುವುದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ N-95 ಮಾಸ್ಕ್ ನೀಡಲಾಗುವುದು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments