Cnewstv.in / 07.06.2021 / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮೆಲ್ಬರ್ನ್: ನಾಸಾದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರನಲ್ಲಿಗೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸುವುದಕ್ಕೆ ಬೆನ್ನೆಲುಬಾಗಿ ನಿಂತಿರುವವರು ಭಾರತೀಯ ಮೂಲದ ಎಂಜಿನಿಯರ್ ಸುಭಾಷಿಣಿ ಅಯ್ಯರ್.
ತಮಿಳುನಾಡಿನ ಕೊಯಮತ್ತೂರಿನವರಾದ ಸುಭಾಷಿಣಿ 1992ರಲ್ಲಿ ವಿಎಲ್‌ಬಿ ಜಾನಕಿಯಮ್ಮಾಳ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪೂರೈಸಿದ ಮೊದಲ ಮಹಿಳೆ ಎಂಬ ಖ್ಯಾತಿಯೂ ಹೊಂದಿದ್ದಾರೆ. ಒರಿಯನ್ ಬಾಹ್ಯಾಕಾಶ ನೌಕೆಯನ್ನು ಚಂದ್ರನಲ್ಲಿಗೆ ಹೊತ್ತೂಯ್ಯಲಿರುವ ಆರ್ಟೆಮಿಸ್ 1 ಯೋಜನೆಯ ಬಿಡಿ ಭಾಗಗಳ ನಿರ್ಮಾಣ ಹಾಗೂ ಆರಂಭಿಕ ಹಂತದ ನಿರ್ವಹಣೆಯನ್ನು ನೋಡಿಕೊಳ್ಳುವ ತಂಡದಲ್ಲಿ ಸುಭಾಷಿಣಿ ಕೂಡ ಒಬ್ಬರು. ರಾಕೆಟ್‌ನ ಕೋರ್ ಸ್ಟೇಜ್ ನಿರ್ಮಾಣ ಪೂರ್ಣಗೊಂಡು, ಅದನ್ನು ಹಸ್ತಾಂತರಿಸುವವರೆಗೆ ನಾಸಾಗೆ ಎಲ್ಲ ರೀತಿಯ ಸಹಾಯ ಮಾಡುವ ಜವಾಬ್ದಾರಿಯೂ ಅವರ ಮೇಲಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments