Cnewstv.in / 07.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಮಹಾಮಹತ್ತಿನ ಮಠದ ಡಾ. ಶ್ರೀ ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ.
ಕಳೆದ ಕೆಲ ದಿನದ ಹಿಂದೆ ಕರೋನಾ ಸೋಂಕಿಗೆ ತುತ್ತಾಗಿದ್ದ ಶ್ರೀಗಳನ್ನು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಕಳೆದ ಮೂರು ದಿನದ ಹಿಂದೆ ಸ್ವಾಮೀಜಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.
ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಕವಲೆದುರ್ಗ ಶ್ರೀಗಳು ಐದು ಪಿಎಚ್ ಡಿ ಪದವಿ ಪಡೆದಿದ್ದರು. ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಲಿಂ. ಡಾ. ಶ್ರೀ ಮಹಾಂತ ಅಪ್ಪಗಳ ಕೃಪಾಪಾತ್ರರಾಗಿದ್ದ ಶ್ರೀಗಳು, ಮಠದಲ್ಲಿ ಯಾವ ಸೇವಕರನ್ನೂ ಇಟ್ಟುಕೊಳ್ಳದೆ, ಮಠಕ್ಕೆ ಬಂದ ಭಕ್ತರಿಗೆ ಕೈಯ್ಯಾರೆ ದಾಸೋಹವನ್ನು ಮಾಡಿ ಬಡಿಸುತ್ತಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv