Breaking News

ತೈಲಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ

Cnewstv.in / 09.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಕೇಂದ್ರ ಸರ್ಕಾರ ಕೊರೋನಾ ಸಂಕಷ್ಟದ ನಡುವೆ ತೈಲ ಬೆಲೆಯೇರಿಕೆ ಮೂಲಕ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಿದೆ. ಅಚ್ಚೇ ದಿನ್ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ದಿನೇದಿನೇ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ತೈಲ ಬೆಲೆ ಇಳಿಕೆ ಆಗಲಿದೆ ಎಂಬ ಭರವಸೆ ಜನರಲ್ಲಿ ಇತ್ತು, ಅದರೆ ಬಿಜೆಪಿ ಸರ್ಕಾರ ಜನರ ನಂಬಿಕೆಯನ್ನು ಹುಸಿ ಮಾಡಿದೆ.

ಯುಪಿಎ ಸರ್ಕಾರ ಇದ್ದಾಗ ಪ್ರತಿ ಲೀಟರ್ ಗೆ ಪೆಟ್ರೋಲ್ 75 ಹಾಗೂ ಡೀಸೆಲ್ 64ರ ಆಸುಪಾಸಿನಲ್ಲಿತ್ತು ಆದರೆ ಎನ್ ಡಿಎಸರ್ಕಾರ ಬಂದ ನಂತರ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ಶೀಘ್ರವೇ ಸರ್ಕಾರ ತೈಲಬೆಲೆ ಇಳಿಸಬೇಕು ಇಲ್ಲವಾದರೇ ಕಾಂಗ್ರೆಸ್ ಕಾರ್ಯಕರ್ತರು ದೇಶದೆಲ್ಲೆಡೆ ಸರ್ಕಾರದ ವಿರುದ್ದ ಉಗ್ರ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು‌

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಚೇತನ್ ,ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್, ಬಾಲಾಜಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*