Breaking News

ಶತಕ ಬಾರಿಸಿದ ಪೆಟ್ರೋಲ್ ದರ, ಯುವ ಕಾಂಗ್ರೆಸ್ ನಿಂದ ಅಣಕು ಸಂಭ್ರಮಾಚರಣೆ.

Cnewstv.in / 09.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದು ಖಂಡಿಸಿ- ತಟ್ಟೆ ಜಾಗಟೆ ಬಾರಿಸಿ ಸಿಹಿ ಹಂಚಿ ಅಣಕು ಸಂಭ್ರಮಾಚರಣೆ ನಡೆಸಿದ್ದರು.

ದೇಶಾದ್ಯಂತ ಪೆಟ್ರೋಲ್ ದರ ಏರಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ನಗರದ ನಂದಿ ಪೆಟ್ರೋಲ್ ಬಂಕ್ ಮುಂಭಾಗ ತಟ್ಟೆ ಜಾಗಟೆಗಳನ್ನು ಬಾರಿಸಿ ಪೆಟ್ರೋಲ್ ಬಂಕಿಗೆ ಬರುವ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ನೀಡುವ ಮುಖಾಂತರ ಅಣಕು ಸಂಭ್ರಮಾಚರಣೆಯನ್ನು ಆಚರಿಸಲಾಯಿತು

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್ ಪಿ ಗಿರೀಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್ , ಮಹಾನಗರ ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೀಶ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ಗ್ರಾಮಂತರ ಅಧ್ಯಕ್ಷ ಈಟಿ ನಿತಿನ್ , ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ . ಎಸ್ ಕುಮಾರೇಶ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಆರ್ ಕಿರಣ್ , ಟಿವಿ ರಂಜಿತ್, ಪದಾಧಿಕಾರಿಗಳಾದ ಎಂ ರಾಹುಲ್ ಸಂದೀಪ್ ಮೊದಲಿಯಾರ್, ವೆಂಕಟೇಶ್ ಕಲ್ಲೂರು, ಪವನ್, ರಾಕೇಶ್, ವಿ ಶರತ್, ಗೋವಿಂದ ವರ್ಮ, ಪ್ರಜ್ವಲ್, ಇತರರು ಇದ್ದರು

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*