Cnewstv.in / 13.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕಳೆದ ಹಲವು ವರ್ಷಗಳಿಂದ ಹಳ್ಳಿಗಾಡಿನ ಆಸ್ಪತ್ರೆಗಳಲ್ಲಿ ಆಯುಷ್ ವೈದ್ಯರು ಸೇವೆ ಸಲ್ಲಿಸುತ್ತಿದ್ದು .COVID ಸಂಕಷ್ಟದ ಸಂದರ್ಭದಲ್ಲಿಯೂ ಕಾರ್ಯನಿರ್ವಹಿಸಿರುತ್ತಾರೆ ಈಗ ನೇರ ನೇಮಕಾತಿಯ ಮೂಲಕ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಿಕೊಂಡಿದ್ದು .ಸುಮಾರು 350 ಆಯುಷ್ ವೈದ್ಯರು ರಾಜ್ಯದಾದ್ಯಂತ ಕೆಲಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.ವೈದ್ಯರ ಅತ್ಯಂತ ಅವಶ್ಯಕವಿರುವ ಇಂಥ ಸಂದರ್ಭದಲ್ಲೂ ಆಯುಷ್ ವೈದ್ಯರು ಕೆಲಸ ಕಳೆದುಕೊಳ್ಳುತ್ತಿರುವುದು ವಿಪರ್ಯಾಸ.
ಆದ್ದರಿಂದ ಸಂಕಷ್ಟದ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದ ಆಯುಷ್ ವೈದ್ಯರಿಗೆ ಪರ್ಯಾಯ ಸ್ಥಳಗಳಿಗೆ ನಿಯೋಜನೆ ಮಾಡಿಕೊಡಲು ಹಾಗೂ ರಾಜ್ಯದಲ್ಲಿ ಆಯುಷ್ ವೈದ್ಯರ ನೇಮಕಾತಿ ಯನ್ನು ಶೀಘ್ರವಾಗಿ ಮಾಡಬೇಕೆಂದು ಶಿವಮೊಗ್ಗದ ವೈದ್ಯರಾದ ಡಾ. ರಾಹುಲ್ ದೇವರಾಜ್ ರವರು ಶನಿವಾರ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಿಗೆ ರಾಜ್ಯದ ಆಯುಷ್ ವೈದ್ಯರ ಪರವಾಗಿ ಮನವಿ ಸಲ್ಲಿಸಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv