Cnewstv.in / 19.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಮುಂಗಾರು ಆರಂಭವಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಂದುವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ 766-C ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ
40.2 ಕಿ.ಮಿ. ನಾಗೋಡಿ ಘಾಟ್ ನಲ್ಲಿ ರಸ್ತೆ ಕುಸಿದಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 30 ಅಥವಾ ಕಾಮಗಾರಿ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ ಸಂಚಾರ ನಿಷೇಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶವನ್ನು ಹೊರಡಿಸಿದ್ದಾರೆ.
ರಾಣೆಬೆನ್ನೂರು – ಹೊಸನಗರ -ಬೈಂದೂರು ಮಾರ್ಗದ ಸಂಚಾರ ರದ್ದು ಮಾಡಿ ಪರ್ಯಾಯವಾಗಿ ರಾಣೆಬೆನ್ನೂರು – ಹೊಸನಗರ -ಮಸ್ತಿಕಟ್ಟೆ ಸಿದ್ಧಾಪೂರ ಮಾರ್ಗದಲ್ಲಿ ತೆರಳಲು ಸೂಚನೆ ನೀಡಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv