Cnewstv.in / 19.06.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಶೇಕಡಾ 5 ಕ್ಕಿಂತ ಹೆಚ್ಚು ಪಾಸಿಟಿವ್ ದರ ಇರುವ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಯಲಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ
ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಧಾರವಾಡ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11ರಂದು ವಿಧಿಸಲಾಗಿರುವ ಆದೇಶದ ಅನ್ವಯ ಮುಂದುವರೆಯಲಿದೆ, ಬೆಳ್ಳಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಡಿಲಿಕೆ ಇರುತ್ತದೆ.
ಮೈಸೂರು ಜಿಲ್ಲೆಯಲ್ಲಿ ಪಾಸಿಟಿವ್ ದರ 10ಕ್ಕಿಂತ ಹೆಚ್ಚಿದ್ದು ಲಾಕ್ ಡೌನ್ ಮುಂದುವರೆಯಲಿದೆ.
ಶೇಕಡಾ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ ಬೆಳಗಾವಿ ರಾಯಚೂರು ಬಾಗಲಕೋಟೆ ಹಾವೇರಿ ಮಂಡ್ಯ ಕೊಪ್ಪಳ ಚಿಕ್ಕಬಳ್ಳಾಪುರ ತುಮಕೂರು ಕೋಲಾರ ಬೆಂಗಳೂರು ನಗರ ಗದಗ ಬೀದರ್ ಯಾದಗಿರಿ ರಾಮನಗರ ದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ.
ಕೆಎಸ್ಆರ್ ಟಿ ಸಿ, ಬಿಎಂಟಿಸಿಯಲ್ಲಿ ಶೇ. 50 ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಎಲ್ಲ ಅಂಗಡಿಗಳು ಬೆಳಗ್ಗೆ 6ರಿಂದ ಸಂಜೆ 5 ಗಂಟೆವರೆಗೆ ತೆರೆಯಲು ಅವಕಾಶವಿದೆ. ಎಸಿ ಬಳಸದೆ ಹೋಟೆಲ್ ಕ್ಲಬ್ ಹಿಂತೆಗೆಯಲು ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶವಿದೆ ಖಾಸಗಿ ಸರ್ಕಾರಿ ಕಚೇರಿಗಳಲ್ಲಿ ಶೇಕಡ 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಬಹುದಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments