Cnewstv.in / 22.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ವಾಕಿಂಗಿಗೆ ಎಂದು ಹೋದ ವ್ಯಕ್ತಿ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ನಿವೃತ್ತ ಎಎಸ್ಐ ಮುಷ್ತಾಕ್ ಅಹ್ಮದ್ ಮೃತ ದುರ್ದೈವಿ.
ನಗರದ ಸೀಗೆಹಟ್ಟಿ ಯಲ್ಲಿ ವಾಸವಾಗಿದ್ದ ಮುಷ್ತಾಕ್ ಅಹಮದ್ ಎಂದಿನಂತೆ ವಾಕಿಂಗಿಗೆ ಹೋಗಿದ್ದರು ಆದರೆ ಅವರು ವಾಕಿಂಗ್ ಮುಗಿಸಿ ಮನೆಗೆ ಹಿಂದಿರುಗಲಿಲ್ಲ ಇದನ್ನು ಗಮನಿಸಿದ ಕುಟುಂಬಸ್ಥರು ಅವರಿಗಾಗಿ ಎಲ್ಲೆಡೆ ಹುಡುಕಾಟ ನಡೆಸಿದರು. ಬಳಿಕ ಅವರ ಶವ ತುಂಗಾ ಸೇತುವೆ ಬಳಿ ಪತ್ತೆಯಾಯಿತು.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಆತ್ಮಹತ್ಯೆಯೇ, ಕೊಲೆಯೋ ಅಥವಾ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎಂಬುವುದನ್ನು ಸ್ಪಷ್ಟಪಡಿಸಬೇಕಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv