Cnewstv.in / 23.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಮಹಿಳಾ ನೌಕರರು ಅವರ ಸೇವಾವಧಿಯಲ್ಲಿ 180 ದಿನಗಳ ಶಿಶುಪಾಲನಾ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಹಿಳಾ ನೌಕರರು ತಾವು ಹೊಂದಿರುವ ಕಿರಿಯ ಮಗು 18 ವರ್ಷ ತುಂಬುವವರೆಗೆ ಈ ರಜೆ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹದಿನೈದು ದಿನಗಳಿಗೆ ಕಡಿಮೆ ಇಲ್ಲದಂತೆ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.

“ರಾಜ್ಯದಲ್ಲಿ ಸುಮಾರು 3 ಲಕ್ಷ ಮಹಿಳಾ ನೌಕರರು ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಯೋಜನೆ ಅನುಷ್ಠಾನದಿಂದಾಗಿ ಲಾಭ ಪಡೆಯುತ್ತಾರೆ. ಬಹಳ ವರ್ಷಗಳ ಸಂಘಟನೆಯ ಈ ಮನವಿಯನ್ನು ಪರಿಗಣಿಸಿ ಆದೇಶವನ್ನ ಹೊರಡಿಸಿರುವ ಮಾನ್ಯ ಮುಖ್ಯ ಮಂತ್ರಿ ಶ್ರೀಯಡಿಯೂರಪ್ಪ ಮತ್ತು ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಅಭಿನಂದನೆ.”
ಸಿ.ಎಸ್ ಷಡಾಕ್ಷರಿ,
ಅಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv