Breaking News

ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿ

Cnewstv.in / 25.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತಗಳನ್ನು ಮಂಡಿಸಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸೂಚಿಸಿದ್ದಾರೆ.

ಪ್ರಜಾಪ್ರಭುತ್ವದ ಪಿತಾಮಹ ಎಂದು ಕರೆಸಿಕೊಳ್ಳುವ ಬಸವಣ್ಣನವರ ಪುತ್ಥಳಿಯನ್ನು ವಿಧಾನಸೌಧದ ಮುಂದೆ ನಿರ್ಮಾಣ ಮಾಡುತ್ತಿರುವುದು ಅರ್ಥಪೂರ್ಣವಾದ ಕಾರ್ಯ. ಸಾಂಕೇತಿಕವಾಗಿ ಬಹಳ ಮಹತ್ವವನ್ನು ಉಂಟುಮಾಡುವ ಸಂಗತಿ. ಜಗತ್ತಿಗೆ ಪ್ರಜಾಪ್ರಭುತ್ವ ಪರಿಚಯವಾಗುವ ಪೂರ್ವದಲ್ಲಿ ಬಸವಣ್ಣನವರು ಪ್ರಜಾಸತ್ತಾತ್ಮಕವಾಗಿ ಅನುಭವ ಮಂಟಪದ ಮೂಲಕ ಎಲ್ಲ ಜನರಿಗೂ ಹಾಗೂ ಮಹಿಳೆಯರಿಗೂ ಕೂಡ ಪ್ರಾತಿನಿಧ್ಯವನ್ನು ನೀಡಿ ಚರ್ಚಾಗೋಷ್ಠಿ ಗಳನ್ನು ನಡೆಸಿದ್ದು ಮಹತ್ವದ ವಿಚಾರ. ಈ ಪುತ್ತಳಿ ನಿರ್ಮಾಣ ವಿಚಾರದಲ್ಲಿ ಕ್ರಿಯಾಶೀಲವಾಗಿ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಈ ಮೂಲಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.”

ಡಾ. ಶ್ರೀ ಬಸವ ಮರುಳಸಿದ್ಧ ಮಹಾಸ್ವಾಮಿ
ಬಸವಕೇಂದ್ರ

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*