Breaking News

ಸಿಗಂದೂರು ಲಾಂಚ್ ನಿಂದ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ

 

Cnewstv.in / 27.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಸಿಗಂದೂರು ಲಾಂಚ್ ನಿಂದ ಶರಾವತಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಇಂದು ನಡೆದಿದೆ.

ರೇಣುಕಾ ಎಂಬ ಹಾವೇರಿ ಜಿಲ್ಲೆಯ ಮಹಿಳೆ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನವನ್ನು ಪಡೆದು, ಹಿಂತಿರುಗಿ ಬರುವಾಗ ಹೊಳೆಯ ಮಧ್ಯಭಾಗದಲ್ಲಿ ನೀರಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

ಲಾಂಚ್ ನಾ ಸಿಬ್ಬಂದಿಗಳು ಹಾಗೂ ಸ್ಥಳೀಯರು ತಕ್ಷಣವೇ ಸೇಫ್ಟಿ ಟ್ಯೂಬ್ ಬಳಸಿ ಮಹಿಳೆಯನ್ನ ರಕ್ಷಿಸಿದ್ದಾರೆ. ಲಾಂಚಿನಲ್ಲಿ ಅವರಿಗೆ ಪ್ರಾರ್ಥಮಿಕ ಆರೈಕೆಯನ್ನು ಮಾಡಿ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*