Cnewstv.in / 29.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ತರಿಕೆರೆ ಕಡೆಯಿಂದ ಶಿವಮೊಗ್ಗ ಕಡೆಗೆ ಮಾರುತಿ ಓಮಿನಿ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ತಾಲೂಕಿನ ಕಾರೇಹಳ್ಳಿ ಚೆಕ್ ಪೋಸ್ಟ್ ಬಳಿ ಗಾಂಜಾ ಸಾಗಿಸುತ್ತಿದ್ದ ಭದ್ರಾವತಿಯ ಸಂಕ್ಲಿಪುರದ ಮುರುಗ(32) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 48 ಕೆಜಿ 656 ಗ್ರಾಂ ತೂಕದ ಒಣಗಾಂಜಾ ಮೊಬೈಲನ್ನು ವಶಪಡಿಸಿಕೊಳ್ಳಲಾಗಿದೆ. ಒಣ ಗಾಂಜಾ ಸುಮಾರು 5.83 ಲಕ್ಷ ರೂ ಮೌಲ್ಯದ್ದು ಎಂದು ಅಂದಾಜಿಸಲಾಗಿದೆ.
ಗಾಂಜಾವನ್ನು ಮಾರುತಿ ಒಮಿನಿಯ ಫ್ಯೂಯಲ್ ಟ್ಯಾಂಕ್, ಡಿಕ್ಕಿ ಡೋರ್, ಬಂಪರ್ , ಚಾರ್ಸಿಯಲ್ಲಿ ಇಟ್ಟು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿಯ ಮೇಲೆ ಎಎಸ್ಪಿ ಭದ್ರಾವತಿ, ಶಿವಮೊಗ್ಗ ಡಿವೈಎಸ್ಪಿ, ಕುಂಸಿ ಠಾಣೆ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂಬಂಧ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399