Cnewstv.in / 02.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಮಹಿಳೆಯೊಬ್ಬಳು ಬಸ್ ನಿಲ್ದಾಣದಲ್ಲಿ ಮಲಗಿದ್ದಾಗ ಅವಳ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಎಂ.ಟಿ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯ ಹತ್ತಿರ ಇರುವ ಬಸ್ ನಿಲ್ದಾಣದಲ್ಲಿ ಮಲಗಿದ್ದ ಲತಾ ಎಂಬುವವರ ಮೇಲೆ ಸಿಮೆಂಟ್ ಸ್ಲಾಬ್ ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಯಾರು ಯಾವ ಉದ್ದೇಶಕ್ಕಾಗಿ ಈ ಹತ್ಯೆ ಮಾಡಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments