Cnewstv.in / 03.07.2021 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಜುಲೈ 5 ರಿಂದ 19ರವರೆಗೆ ಮೂರನೇ ಹಂತದ ಅನ್ ಲಾಕ್ ಜಾರಿಯಲ್ಲಿರುತ್ತದೆ. ರಾಜ್ಯದ್ಯಂತ ವಿಧಿಸಿದ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದ್ದು ಬೆಳಿಗ್ಗೆ 5 ರಿಂದ ಸಂಜೆ 9 ರವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಇಂದು ಪತ್ರಿಕಾಗೋಷ್ಠಿಯ ಮೂಲಕ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಸಚಿವರ ಜೊತೆ ಸೇರಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಅನ್ ಲಾಕ್ 3.0 : ಏನಿರುತ್ತೆ ಏನಿರಲ್ಲ
*ದೇವಾಲಯಗಳಲ್ಲಿ ದರ್ಶನಕ್ಕೆ ಅನುಮತಿ ನೀಡಲಾಗಿದೆ.
*ಸೋಮವಾರದಿಂದ ಎಲ್ಲಾ ಮಾಲ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಪಬ್ ಬಾರ್ ಗಳಿಗೆ ಅವಕಾಶ ನೀಡಿಲ್ಲ.
*ಮೆಟ್ರೋ, ಬಸ್ ಮತ್ತು ಸಾರ್ವಜನಿಕ ಸಾರಿಗೆಗಳಿಗೆ 100% ಜನರಿಗೆ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ.
* ಮದುವೆ ಹಾಗೂ ಇನ್ನಿತರ ಸಮಾರಂಭಕ್ಕೆ ನೂರು ಜನರಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
*ನೈಟ್ ಕರ್ಫ್ಯೂ 9:00 ರಿಂದ 6:00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಆದರೆ ವೀಕೆಂಡ್ ಕರ್ಫ್ಯೂ ಇರುವುದಿಲ್ಲ
*ಸಾಮಾಜಿಕ ಧಾರ್ಮಿಕ ಮತ್ತು ರಾಜಕೀಯ ಸಭೆ-ಸಮಾರಂಭಗಳಿಗೆ ಪ್ರತಿಭಟನೆಗಳಿಗೆ ಅವಕಾಶವಿರುವುದಿಲ್ಲ
*ಅಂತ್ಯಸಂಸ್ಕಾರಕ್ಕೆ 20 ಜನರು ಭಾಗವಹಿಸಬಹುದು.
*ಈಜು ಕೊಳಗಳಲ್ಲಿ ಕ್ರೀಡಾಪಟುಗಳಿಗೆ ಮಾತ್ರ ಅಭ್ಯಾಸ ಮಾಡಲು ಅವಕಾಶ
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments