Breaking News

ಅಂಜನಾಪುರ ಜಲಾಶಯ ಭರ್ತಿ

Cnewstv.in / 04.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಭರ್ತಿಯಾಗಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ

ತೀರ್ಥಹಳ್ಳಿ, ರಿಪ್ಪನ್ ಪೇಟೆ, ಹುಂಚ ಭಾಗಗಳಲ್ಲಿ ಮಳೆಯಾಗುತ್ತಿರುವುದರಿಂದ ಅಂಜನಾಪುರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಆಗಸ್ಟ್ ಮೊದಲ ವಾರದಲ್ಲಿ ಅಂಜನಾಪುರ ಜಲಾಶಯ ಸಾಮಾನ್ಯವಾಗಿ ಭರ್ತಿ ಆಗುತ್ತಿತ್ತು ಆದರೆ ಈ ಬಾರಿ ವಾಡಿಕೆಗಿಂತಲು ಮೊದಲೇ ಜಲಾಶಯ ಭರ್ತಿಯಾಗಿದೆ.

ಅಂಜನಾಪುರ ಜಲಾಶಯವು 1.92 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಹೊಂದಿದ್ದು, ಶಿಕಾರಿಪುರ ಶಿರಾಳಕೊಪ್ಪಕ್ಕೆ ಇಲ್ಲಿಂದಲೇ ಕುಡಿಯುವ ನೀರು ಸರಬರಾಜಾಗುತ್ತದೆ. ಇನ್ನು ಜಲಾಶಯ ಭರ್ತಿ ಆಗುತ್ತಿದ್ದಂತೆ ಇದನ್ನು ನೋಡಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=5068

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*