Breaking News

ಲಸಿಕೆ ವಿಚಾರವಾಗಿ ಕೈ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು.

Cnewstv.in / 06.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ತೀರ್ಥಹಳ್ಳಿಯ ಸೋಬಿನಕೆರೆ ಶಾಲೆಯಲ್ಲಿ ಕೊರೊನಾ ಲಸಿಕೆ ವಿಚಾರವಾಗಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ನಂತರ ಕೈ ಕೈ ಮಿಲಾಯಿಸಿದ್ದಾರೆ.‌

ಬಿಜೆಪಿ ಕಾರ್ಯಕರ್ತರು ಸೂಚಿಸಿದವರಿಗೆ ಮಾತ್ರ ಲಸಿಕೆ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪಣೆ ತೆಗೆದಾಗ ಗಲಾಟೆಯಾಗಿದ್ದು ಆಸ್ಪತ್ರೆಗೆ ದಾಖಲಾಗಿ ದೂರು-ಪ್ರತಿದೂರು ನೀಡಿದ್ದಾರೆ.

ಗಲಾಟೆಗೆ ಕಾರಣವಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ತೀರ್ಥಹಳ್ಳಿಯ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಬಿಜೆಪಿ ಕಾರ್ಯಕರ್ತರು ಸಹ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಇದನ್ನು ಒದಿ : https://cnewstv.in/?p=5083

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*