Breaking News

ಎಚ್.ವಿಶ್ವನಾಥ್ : ಮಕ್ಕಳಿಂದಲೇ ಯಡಿಯೂರಪ್ಪ ಜೈಲಿಗೆ ಹೋಗಿದ್ದು.

Cnewstv.in / 06.07.2021 /ಬೆಂಗಳೂರು/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ಮಕ್ಕಳಿಂದಲೇ ಯಡಿಯೂರಪ್ಪನವರು ಜೈಲಿಗೆ ಹೋಗಿದ್ದು, ಅವರ ನಕಲಿ ಸಹಿ ಮಾಡಿ ಅವರನ್ನು ಜೈಲಿಗೆ ಕಳುಹಿಸಿದರು‌. ಬಿ.ವೈ ವಿಜಯೇಂದ್ರ ಅವರು ಪ್ರತಿಯೊಂದು ಇಲಾಖೆಯಲ್ಲೂ ಹಸ್ತಕ್ಷೇಪ ಮಾಡುತ್ತಾರೆ. ವಿವಿಧ ಇಲಾಖೆಗಳಲ್ಲಿ ಸಚಿವರ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಸಹಾ ಬಿಡುಗಡೆ ಮಾಡಿದ್ದಾರೆ.

ಮಕ್ಕಳಿಂದಲೇ ಮತ್ತೊಮ್ಮೆ ಯಡಿಯೂರಪ್ಪನವರು ಜೈಲಿಗೆ ಹೋಗಬಾರದು. ಇ.ಡಿ ನಲ್ಲಿ ವಿಜಯೇಂದ್ರ ಅವರ ಮೇಲೆ ಕೇಸು ದಾಖಲಾಗಿದೆ. ಇದೇ ವಿಚಾರವಾಗಿಯೇ ವಿಜಯೇಂದ್ರ ಅವರು ಪದೇ ಪದೇ ದೆಹಲಿಗೆ ಹೋಗುತ್ತಿದ್ದಾರೆ. ವಿಜಯೇಂದ್ರ ಅವರ ಭ್ರಷ್ಟಾಚಾರ ಮುಗಿಲುಮುಟ್ಟಿದೆ ಎಂದು ಕಿಡಿಕಾರಿದ್ದಾರೆ.

ಇದನ್ನು ಓದಿ: https://cnewstv.in/?p=5087

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*