Cnewstv.in / 08.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ.
ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು. ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು.

ಕೋವಿಡ್ ಕಾರಣದ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿನಿಂದ ಬಂದ್ ಆಗಿದ್ದ ಮಾಲ್ಗುಡಿ ಮ್ಯೂಸಿಯಂ ರೀ ಓಪನ್ ಅಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.. ಮ್ಯೂಸಿಯಂಗೆ ಆಗಮಿಸುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಮಾಜಿಕ ಅಂತರವನ್ನ ಕಾಯ್ದುಕೊಳ್ಳಬೇಕು ಎಂದು ತಿಳಿಸಲಾಗಿದೆ
ಇದನ್ನು ಒದಿ : https://cnewstv.in/?p=5080
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv