Cnewstv.in / 08.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ರಾಜ್ಯ ಕಂಡ ಧೀಮಂತ ರಾಜಕಾರಣಿ, ರೈತರಿಗೆ, ಬಡವರಿಗೆ, ವಿದ್ಯಾರ್ಥಿಗಳಿಗೆ, ಹೀಗೆ ಜನಾಸಕ್ತಿಗೆ ತಕ್ಕಂತೆ ಹಲವಾರು ಯೋಜನೆಗಳನ್ನು ತಂದು ಬಂಗಾರಪ್ಪನವರ ಹೆಸರನ್ನು ಸೋಗಾನೆ ಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನನಿಲ್ದಾಣಕ್ಕೆ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಬಂಗಾರಪ್ಪನವರ ಭಾವಚಿತ್ರದ ಮಾಸ್ಕ್ ಧರಿಸಿ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಜನರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದರು, ಬಂಗಾರಪ್ಪನವರು ದಿವಂಗತರಾಗಿದ್ದು ಸಹ 7 ಕೋಟಿ ಜನರ ಮನಸ್ಸಲ್ಲಿ ಜೀವಂತವಾಗಿದ್ದಾರೆ ಹೀಗಾಗಿ ಅವರ ಹೆಸರನ್ನು ವಿಮಾನನಿಲ್ದಾಣಕ್ಕೆ ಇಡಬೇಕು ಎಂದು ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪಕರಾದ ವಿನಯ್ ರಾಜಾವತ್ ತಿಳಿಸಿದರು.
ಇದನ್ನು ಒದಿ : https://cnewstv.in/?p=5104
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv