Cnewstv.in / 10.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಸರ್ಕಾರ ಕೊರೋನಾದ ಬಗ್ಗೆ ತಪ್ಪು ಲೆಕ್ಕಾಚಾರ ನೀಡುತ್ತಿದೆ. ಈ ಕುರಿತು ಸತ್ಯಾಸತ್ಯತೆಗಳನ್ನು ಪರಾಮರ್ಶೆ ಮಾಡುವುದಕ್ಕಾಗಿ, ಕೊರೊನಾ ದಿಂದ ಮೃತಪಟ್ಟವರಿಗೆ ಕಾಂಗ್ರೆಸ್ ಸಹಾಯಾಸ್ತ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಾಳೆ ಬೆಳಿಗ್ಗೆ 10.30 ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್ ರವರು ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹಲವು ತಂಡಗಳಾಗಿ ಮನೆ ಮನೆಗೆ ಭೇಟಿ ನೀಡಿ ವಿವರಗಳನ್ನು ಕಲೆ ಹಾಕುವುದರ ಜೊತೆಗೆ ಅಗತ್ಯ ನೆರವುಗಳನ್ನು ನೀಡಲಿದ್ದೇವೆ ಎಂದರು
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆಬಿ ಪ್ರಸನ್ನ ಕುಮಾರ್, ಹೆಚ್.ಸಿ.ಯೋಗೇಶ್, ಯಮುನಾ ರಂಗೇಗೌಡ, ರಂಗನಾಥ್, ಗಿರೀಶ್, ವಿಶ್ವನಾಥ್ ಕಾಶಿ ಉಪಸ್ಥಿತರಿದ್ದರು
ಇದನ್ನು ಒದಿ : https://cnewstv.in/?p=5113
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv