Cnewstv.in / 13.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ: ಜಿಲ್ಲೆಯಲ್ಲಿ ಗಾಂಜಾ ಹಾವಳಿ ಮಿತಿ ಮೀರುತ್ತಿದ್ದು, ಇದನ್ನು ಹತ್ತಿಕ್ಕಲು ವಿಶೇಷ ತನಿಖಾ ತಂಡವನ್ನು ರಚಿಸಬೇಕೆಂದು ಒತ್ತಾಯಿಸಿ ಕರವೇ ಯುವ ಸೇನೆ ಇಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.
ಗಾಂಜಾ ಹಾವಳಿ ಮಿತಿ ಮೀರುತ್ತಿದೆ. ಇದರಿಂದಾಗಿ ಸಾಮಾಜಿಕ ಸ್ವಾಸ್ಯ ಹಾಳಾಗುತ್ತಿದೆ. ಅಲ್ಲದೆ ನೆರೆಯ ರಾಜ್ಯ ಹಾಗೂ ರಾಷ್ಟ್ರಗಳಿಗೂ ಕೂಡಾ ಇಲ್ಲಿಂದಲೇ ಗಾಂಜಾ ಸರಬರಾಜಾಗುತ್ತಿದೆ. ಈಗಾಗಲೇ ಗಾಂಜಾ ವಿಷಯಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.
ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಮತ್ತು ಯುವಕರಿಗೆ ಮಾರಕವಾಗಿರುವ ಗಾಂಜಾ ಮಾರಾಟ ಮತ್ತು ಬೆಳೆಯುವ ಆ ಬಗ್ಗೆ ಪತ್ತೆ ಹಚ್ಚಲು ವಿಶೇಷ ತನಿಖಾ ತಂಡ ರಚಿಸುವ ಮೂಲಕ ಮಲೆನಾಡಿನ ಜಿಲ್ಲೆಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಗಾಂಜಾ ವ್ಯವಹಾರಕ್ಕೆ ಸಂಪೂರ್ಣ ವಿರಾಮಹಾಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಿರಣ್ ಕುಮಾರ್, ಶಿವಕುಮಾರ್, ಸತೀಶ್ ಮೊದಲಾದವರಿದ್ದರು
ಇದನ್ನು ಒದಿ : https://cnewstv.in/?p=5130
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv