Breaking News

ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಪೊಲೀಸರ ದಾಳಿ, ಗೋವುಗಳ‌ ರಕ್ಷಣೆ. ‌

Cnewstv.in / 21.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಪುರದಾಳ ಅನುಪಿನಕಟ್ಟೆ ಮಾರ್ಗವಾಗಿ ಟಾಟಾ ಏಸ್ ವಾಹನದಲ್ಲಿ ಗೋವುಗಳನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಅನುಪಿನಕಟ್ಟೆ ವಿನಾಯಕ ಸರ್ಕಲ್ ಬಳಿ ಪೊಲೀಸರು ದಾಳಿ ಮಾಡಿದ್ದಾರೆ.

ಪೊಲೀಸರು ದಾಳಿ ಮಾಡುತ್ತಿದ್ದಂತೆ ಕಳ್ಳರು ವಾಹನವನ್ನು ನಿಲ್ಲಿಸಿ ಪರಾರಿಯಾಗಿದ್ದಾರೆ. ಟಾಟಾ ಎಸ್ ನಲ್ಲಿ 4 ಹಸುಗಳು ಹಾಗೂ ಇಬ್ಬರು ಎಂದು ತಿಳಿದುಬಂದಿದ್ದು, ಪೊಲೀಸರು ಗೋವುಗಳನ್ನು ಹಾಗೂ ಟಾಟಾ ಎಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಇದನ್ನು ಒದಿ : https://cnewstv.in/?p=5179

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*