Cnewstv.in / 23.07.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕಳೆದ ಎರಡು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗುತ್ತಿವೆ. ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ಭದ್ರಾ ಮತ್ತು ತುಂಗಾ ಜಲಾಶಯಗಳ ಒಳಹರಿವು ಹೆಚ್ಚಾಗಿದೆ.
ಲಿಂಗನಮಕ್ಕಿ ಜಲಾಶಯಕ್ಕೆ ಒಂದೇ ದಿನ 3 ಅಡಿ ನೀರು ಬಂದಿದ್ದು, ನದಿಯ ನೀರಿನ ಮಟ್ಟ 1799.65 ಅಡಿಗೆ ಏರಿಕೆ ಆಗಿದೆ. 1,51,000 ಕ್ಯೂಸೆಕ್ ಗೂ ಅಧಿಕ ಒಳಹರಿವಿದೆ. ಕಳೆದ 24 ಗಂಟೆಗಳಲ್ಲಿ ಜಲಾನಯನ ಪ್ರದೇಶದಲ್ಲಿ 140 ಮಿಲಿಮೀಟರ್ ಮಳೆಯಾಗಿದೆ.
ಭದ್ರಾ ಜಲಾಶಯಕ್ಕೆ ಒಂದೇ ದಿನ 3 ಅಡಿ ನೀರು ಬಂದಿದ್ದು, 39,286 ಕ್ಯೂಸೆಕ್ ಒಳಹರಿವಿದೆ. ಡ್ಯಾಮಿನ ನೀರಿನ ಮಟ್ಟ 171.1 ಅಡಿಗೆ ತಲುಪಿದೆ.
ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ತುಂಗಾ ಜಲಾಶಯಕ್ಕೆ 48,323 ಒಳಹರಿವಿದೆ. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನ ರಾತ್ರಿ ಹೊರಬಿಡಲಾಗಿತ್ತು.
ಇದನ್ನು ಒದಿ : https://cnewstv.in/?p=5197
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments