Cnewstv.in / 23.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ತುಂಗಾನದಿಯಲ್ಲಿ ನಿರಂತರವಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ತೀರ್ಥಳ್ಳಿ, ಶೃಂಗೇರಿ, ಕೊಪ್ಪ ಭಾಗಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವಂತಾಗಿದೆ. ಜೋರು ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ಕುಂಬಾರಗುಂಡಿ, ವಿದ್ಯಾನಗರ, ಸೀಗೆ ಹಟ್ಟಿ, ಹೊಸಮನೆ, ರಾಜೀವ್ ಗಾಂಧಿ ಬಡಾವಣೆ, ಜನರು ಅತಂಕದಲ್ಲಿ ಇದ್ದಾರೆ. ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ತುಂಗಾ ಜಲಾಶಯಾದ ಎಲ್ಲಾ ಗೇಟುಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಈಗಾಗಲೇ ಶಿವಮೊಗ್ಗದ ಮಂಟಪ ಮುಳುಗಿದೆ..
ತುಂಗಾ ಜಲಾಶಯದಿಂದ ಬೆಳಿಗ್ಗೆ 65000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿತ್ತು. ಮಧ್ಯಾಹ್ನದ ಮೇಲೆ 74,500 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ. ಈಗಾಗಲೇ ನದಿಪಾತ್ರದ ಅನೇಕ ಮನೆಗಳಿಗೆ ನೀರು ನುಗ್ಗುವ ಸ್ಥಿತಿ ನಿರ್ಮಾಣವಾಗಿದ್ದು, ಜನರು ಆತಂಕದಲ್ಲಿದ್ದಾರೆ.
ಇದನ್ನು ಒದಿ : https://cnewstv.in/?p=5208
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments