Breaking News

ಅಭಿನಯ ಶಾರದೆ ಜಯಂತಿ ಇನ್ನಿಲ್ಲ

Cnewstv.in / 26.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ
ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ಜಯಂತಿಯವರು ಅಸ್ತಮಾ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಜಯಂತಿಯವರ ಮೂಲ ಹೆಸರು ಕಮಲಕುಮಾರಿ ಬಳ್ಳಾರಿ ಮೂಲದವರು. ನಿರ್ದೇಶಕ ಪುಟ್ಟಸ್ವಾಮಿಯವರು ಕಮಲಕುಮಾರಿಗೆ ಜಯಂತಿ ಎಂದು ನಾಮಕರಣ ಮಾಡಿದರು.

ಜಯಂತಿ ಕನ್ನಡ ತಮಿಳು ತೆಲುಗು ಹಿಂದಿ ಮರಾಠಿ ಮಲಯಾಳಂ ಸೇರಿದಂತೆ ಆರು ಭಾಷೆಗಳಲ್ಲಿ ಸುಮಾರು 500ರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೇನುಗೂಡು ಸಿನಿಮಾದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಬಂದ ಜಯಂತಿಯವರು ಅನೇಕ ಹಿರಿಯ ನಟರೊಂದಿಗೆ ನಟಿಸಿದ್ದಾರೆ. ಡಾ.ರಾಜಕುಮಾರ್ ಜೊತೆ 47 ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.

ಹಿರಿಯ ನಟಿ ಜಯಂತಿ ಅಗಲಿಕೆಗೆ, ಕನ್ನಡ ಚಿತ್ರರಂಗ, ಅನೇಕ ನಟ-ನಟಿಯರು ಸಂತಾಪವನ್ನು ಸೂಚಿಸಿದ್ದಾರೆ.

ಇದನ್ನು ಒದಿ : https://cnewstv.in/?p=5231

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*