Cnewstv.in / 28.07.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಂಗಳೂರು : ಇಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಸಿದ್ದರಾಮಯ್ಯನವರು ಅಭಿನಂದನೆಗಳನ್ನು ಸಲ್ಲಿಸುವುದರ ಜೊತೆಗೆ ಸಲಹೆಗಳನ್ನು ನೀಡಿದ್ದಾರೆ. 
*ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೊಮ್ಮಯಿ ಅವರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.ಜವಾಬ್ದಾರಿಯುತ ವಿರೋಧಪಕ್ಷವಾಗಿ ನಿಮಗೆ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಬಯಸುತ್ತೇನೆ.
ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ಸಿಗಲಿ ಎಂದು ಹಾರೈಸುತ್ತೇನೆ.
*ಕಳೆದೆರಡು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಎಸಗಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಅಧಿಕಾರದ ಆಸೆಯೋ, ತಿಳುವಳಿಕೆಯ ಕೊರತೆಯೋ, ಇಲ್ಲವೇ ಅವ್ಯಕ್ತ ಭೀತಿಯೋ @BSYBJP ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೊಲ್ಲೆತ್ತಲಿಲ್ಲ.
ಆ ಧೈರ್ಯ ನೀವು ತೋರಿಸುತ್ತೀರಿ ಎಂದು ನಂಬಿದ್ದೇನೆ.
*ಬರಪರಿಹಾರ, ಜಿಎಸ್ ಟಿ ಪಾಲು, ತೆರಿಗೆ ಹಂಚಿಕೆ, ಕೊರೊನಾ ನಿಯಂತ್ರಣಕ್ಕೆ ನೆರವು ಈ ಎಲ್ಲ ವಿಚಾರಗಳಲ್ಲಿ @BJP4India ಸರ್ಕಾರ ಕರ್ನಾಟಕವನ್ನು ಮಲತಾಯಿ ಧೋರಣೆಯಲ್ಲಿ ಕಂಡಿದೆ. ಇದನ್ನು ಮೋದಿ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಒದಗಿಸುವ ಕೆಲಸವನ್ನು ನೀವು ಆದ್ಯತೆಯಿಂದ ಮಾಡಬೇಕು.
*ರಾಜ್ಯಕ್ಕೆ ಅನ್ಯಾಯವಾದಾಗ ಸರ್ವಪಕ್ಷಗಳ ಸಭೆ ಮತ್ತು ನಿಯೋಗದ ಮೂಲಕ ನ್ಯಾಯ ಪಡೆಯುವ ಪರಂಪರೆ ನಮ್ಮಲ್ಲಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾದ ಮುಕ್ತ ಚರ್ಚೆ – ಸಂವಾದಗಳೇ ನಿಂತುಬಿಟ್ಟಿವೆ.
* ಮುಖ್ಯಮಂತ್ರಿ ಸ್ಥಾನ ಪಕ್ಷದ ಹುದ್ದೆಯಲ್ಲ, ಅದು ಇಡೀ ರಾಜ್ಯಕ್ಕೆ ಸಂಬಂಧಿಸಿದ್ದು.ವಿರೋಧ ಪಕ್ಷವಾಗಿ ಸೈದ್ಧಾಂತಿಕ ಸಂಘರ್ಷ ಜಾರಿಯಲ್ಲಿದ್ದರೂ ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ನಾವೆಲ್ಲ ಒಂದು ತಂಡವಾಗಿ ಕೆಲಸಮಾಡಬೇಕೆಂದು ನಿಮಗಿಂತ ವಯಸ್ಸು ಮತ್ತು ಅನುಭವದಲ್ಲಿ ಹಿರಿಯನಾದ ನನ್ನ ಸಲಹೆಯಾಗಿದೆ.
*ಸಾರ್ವಜನಿಕ ಮಹತ್ವದ ಹತ್ತಾರು ಪತ್ರಗಳನ್ನು ಬರೆದರೂ ಪ್ರತಿಕ್ರಿಯಿಸುವ ಸೌಜನ್ಯವನ್ನೂ ಹಿಂದಿನ ಮುಖ್ಯಮಂತ್ರಿಗಳು ತೋರಿಲ್ಲ ಎನ್ನುವುದನ್ನು ವಿಷಾದದಿಂದ ಹೇಳಬೇಕಾಗಿದೆ.
ಪಾರದರ್ಶಕತೆ ಪ್ರಜಾಪ್ರಭುತ್ವದ ಆತ್ಮವಾಗಿದೆ.
ನಿಮ್ಮ ಕಾಲದಲ್ಲಿಯಾದರೂ ಮಾಹಿತಿ ವಿನಿಮಯ ಸುಗಮವಾಗಿ ನಡೆಯುವಂತೆ ಮಾಡುವಿರೆಂದು ನಂಬಿದ್ದೇನೆ.
ಇದನ್ನು ಒದಿ : https://cnewstv.in/?p=5251
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv