Cnewstv.in / 30.07.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಅಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು ರೂ.40ಕ್ಕೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20ಕಿಮೀ ವ್ಯಾಪ್ತಿಯಲ್ಲಿ ಅಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಖಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಅಟೋ ಪರವಾನಿಗೆ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಅಟೋಗಳಿಗೆ ಪರವಾನಿಗೆ ಅಗತ್ಯವಿಲ್ಲ. ಆದರೆ ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಅಟೋ ಮೀಟರ್ ಹಾಕದಿರುವ ಬಗ್ಗೆ ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಅಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದನ್ನು ಒದಿ : https://cnewstv.in/?p=5274
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments