Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ 19 ರ ಮೂರನೇ ಅಲೆಯನ್ನು ನಿಯಂತ್ರಿಸುವ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿವಮೊಗ್ಗ ಜಿಲ್ಲಾಧಿಕಾರಿಗಳು ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.
1.ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ
ಕಾಯ್ದುಕೊಳ್ಳುವುದು ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಿದೆ.
2. ಅಂತರ್ ರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಬಸ್ ಅಥವಾ ವೈಯಕ್ತಿಕ ಸಾರಿಗೆ ಮೂಲಕ ಪ್ರವೇಶ
ಪಡೆಯುವವರಿಗೆ ಕೋವಿಡ್ 2ನೇ ಡೋಸ್ ಲಸಿಕೆಯನ್ನು ಪಡೆದಿದ್ದರೂ ಸಹ 72 ಗಂಟೆಗಳ ಒಳಗೆ
ಮಾಡಿಸಿದ RT-PCR ಪರೀಕ್ಷಾ ನೆಗೆಟಿವ್ ಪ್ರಮಾಣ ಪತ್ರವನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ.
3. ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಹೋಟೆಲ್/ಲಾಡ್ / ಹೋಂ ಸ್ನೇ/ ಅರಣ್ಯ ಇಲಾಖೆಗಳ ವಸತಿ ಗೃಹಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಪ್ರವಾಸಿಗಳು ಚೆಕ್ ಇನ್ ದಿನದಿಂದ ಹಿಂದಿನ 72 ಗಂಟೆಗಳೊಳಗಾಗಿ ಮಾಡಿಸಿದ RT-PCR ನೆಗೆಟಿವ್ ವರದಿ ಹೊಂದಿರಬೇಕು.
4. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ಜೋಗ್ ಜಲಪಾತ,
ಆಗುಂಬೆಯ ಸೂರ್ಯಸ್ಥ ವೀಕ್ಷಣೆಯ ಸ್ಥಳ, ಗಾಜನೂರು ಡ್ಯಾಂ, ಬಿ.ಆರ್.ಪಿ. ಡ್ಯಾಂ, ಹುಲಿ ಮತ್ತು ಸಿಂಹಧಾಮ, ಸಕ್ರಬೈಲು ಆನೆ ಬಿಡಾರ ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು ಮತ್ತು ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇತ್ಯಾದಿ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಹಿಂದಿನ 72 ಗಂಟೆಗಳೊಳಗಾಗಿ ಮಾಡಿಸಿದ RT-IPCR ನಗೆಟಿವ್ ಪರೀಕ್ಷಾ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲಾಗಿದೆ.
5. ಮದುವೆ ಸಮಾರಂಭಗಳಲ್ಲಿ ಕೇವಲ 50 ಜನರಿಗೆ ಮಾತ್ರ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು
ಪಾಲಿಸಿ ಭಾಗವಹಿಸಲು ಅನುಮತಿಸಿದೆ.
6. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಎಲ್ಲಾ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ ಕಲಂ 51 ರಿಂದ 60ರ ಉಪಬಂಧಗಳು ಮತ್ತು ಭಾರತೀಯ ದಂಡ ಸಂಹಿತ ಕಲಂ 188ರ
ಅಡಿಯಲ್ಲಿನ ಕಾನೂನು ಕ್ರಮಗಳು ಮತ್ತು ಕಾಲಕಾಲಕ್ಕೆ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ
ಮೇರೆಗೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.
ಇದನ್ನು ಒದಿ : https://cnewstv.in/?p=5298
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv