Cnewstv.in / 04.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ದೊರೆತಿದೆ. ಶಿವಮೊಗ್ಗ ನಗರದ ಶಾಸಕರಾದ ಕೆ.ಎಸ್.ಈಶ್ವರಪ್ಪ, ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಜಿಲ್ಲಾ ಬಿಜೆಪಿ ಕಚೇರಿಯ ಮುಂದೆ ಪಕ್ಷದ ಪ್ರಮುಖರ ಪರವಾಗಿ ಘೋಷಣೆ ಕೂಗಿದ ಕಾರ್ಯಕರ್ತರು, ಸಿಹಿ ಹಂಚಿ ಸಂಭ್ರಮಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಮಣ್ಣ , ಮಹಾನಗರ ಪಾಲಿಕೆ ಸದಸ್ಯ ವಿಶ್ವನಾಥ್, ಶಿವಮೊಗ್ಗದ ಮಾಜಿ ಮೇಯರ್ ಸುವರ್ಣಾ ಶಂಕರ್, ಮಾಜಿ ಉಪ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ ಹಲವರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.
ಇದನ್ನು ಒದಿ : https://cnewstv.in/?p=5310
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv