Cnewstv.in / 05.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಬೆಳಗ್ಗೆ ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಪ್ರತಿಭಟಿಸಿ ನಂತರ ಶಿವಮೊಗ್ಗ ಜಿಲ್ಲೆಯ ಬಿಜೆಪಿ ಸಂಸದರ ಮನೆಗೆ ಮುತ್ತಿಗೆ ಹಾಕಲಾಯಿತು.
ಕೇಂದ್ರ ಬಿಜೆಪಿ ಸರ್ಕಾರ ಜಿ.ಎಸ್.ಟಿ,ಕೊರೋನ ನಿರ್ವಹಣೆಯಲ್ಲಿ, ಕೋವಿಡ್ ಲಸಿಕೆ ನೀಡುವದರಲ್ಲಿ , ವಿಫಲವಾಗಿದೆ ಮತ್ತು ಶಿವಮೊಗ್ಗ ಜಿಲ್ಲೆಯ ಸಂಸದರು ಸೇರಿ ರಾಜ್ಯದ ಎಲ್ಲ ಬಿಜೆಪಿ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತದೆ ಮೌನವಹಿಸಿದ್ದಾರೆ.
ರೈತ ಹಾಗೂ ಕಾರ್ಮಿಕ ವಿರೋಧಿ ಅವೈಜ್ಞಾನಿಕ ಕಾಯ್ದೆಗಳನ್ನು ಜಾರಿಗೊಳಿಸುತ್ತಿದ್ದು ಜೊತೆಗೆ ಈಗಾಗಲೇ ವಿದ್ಯುತ್ ಕಾಯ್ದೆ ಮಸೂದೆ ತಿದ್ದುಪಡಿ ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ನೀತಿಯನ್ನು ಜಾರಿಗೆ ತರಲು ಹೊರಟಿರುವುದು ಹಾಗೂ ಕರ್ನಾಟಕ ರಾಜ್ಯಕ್ಕೆ ನೆರೆ ಪರಿಹಾರ, ಜಿ.ಎಸ್.ಟಿ ತೆರಿಗೆಯಿಂದ ಬರಬೇಕಾದ ಪರಿಹಾರದ ಹಣವನ್ನು ನೀಡದೇ ಮಲತಾಯಿ ಧೋರಣೆ ಮಾಡುತ್ತಿರುವುದು ಮತ್ತು ರಾಜ್ಯದಿಂದ ಗೆದ್ದಂತಹ 25 ಬಿಜೆಪಿ ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತದೆ ಮೌನವಹಿಸಿದ್ದಾರೆ ಕೂಡಲೇ ರಾಷ್ಟ್ರಪತಿಗಳು ಇಂತಹ ಜನವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕೆಂದು ಯುವ ಕಾಂಗ್ರೆಸ್ ನಿಂದ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಮಾಜಿ ಶಾಸಕರಾದ ಕೆ.ಬಿ ಪ್ರಸನ್ನಕುಮಾರ್ , ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎನ್. ರಮೇಶ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅನಿತಾ ಕುಮಾರಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಎ ಸ್. ರವಿ ಕುಮಾರ್, ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೀಶ್ , ರೇಖಾ ರಂಗನಾಥ್ , ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು
ಇದನ್ನು ಒದಿ : https://cnewstv.in/?p=5320
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv