Breaking News

ಇಂದಿನಿಂದ ಆಗಸ್ಟ್ 13ರ ವರೆಗೆ ಧರ್ಮಸ್ಥಳ, ಸಿಗಂದೂರು, ದೇವಾಲಯದಲ್ಲಿ ಎಲ್ಲಾ ಸೇವೆಗಳು ಸ್ಥಗಿತ. ವಾರಾಂತ್ಯದಲ್ಲೂ ಇಲ್ಲ ದರ್ಶನ ಭಾಗ್ಯ.

Cnewstv.in / 06.08.2021/ ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಸಾವಿರಾರು ಭಕ್ತರು ದರ್ಶನಕ್ಕೆಂದು ಆಗಮಿಸುತ್ತಾರೆ ಅದರಲ್ಲಿಯೂ ವಾರಾಂತ್ಯದಲ್ಲಿ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ ಆದರೆ ಈ ಬಾರಿ ಕೊವೀಡ್ ಮೂರನೇ ಅಲೆ ನಿಯಂತ್ರಣ ಮಾಡುವ ಸಂಬಂಧ ವಾರಾಂತ್ಯದಲ್ಲಿ ದೇವಾಲಯದ ಪ್ರವೇಶವನ್ನು ನಿಷೇಧಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 5.8.2021 ರಿಂದ 15.8.2021 ರವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸೇವೆ, ಪ್ರಸಾದ, ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ. ವಾರಾಂತ್ಯದಲ್ಲಿ ದೇವರ ದರ್ಶನವನ್ನು ನಿಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

ಸಿಗಂದೂರು ಶ್ರೀ ಚೌಡೇಶ್ವರಿ ದೇವಿಯ ದರ್ಶನ ಪಡೆಯಲು ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ ಇದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಆಗಸ್ಟ್ 13 ರವರೆಗೆ ದೇವಾಲಯದಲ್ಲಿ ಎಲ್ಲಾ ಸೇವೆಗಳು ಸ್ಥಗಿತಗೊಳಿಸಿದ್ದು ದೇವಾಲಯಕ್ಕೆ ಬರುವ ಭಕ್ತರಿಗೆ ದರ್ಶನ ಕೃಪೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನು ಒದಿ : https://cnewstv.in/?p=5336

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*