Breaking News

ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಹೃದ್ರೋಗಕ್ಕೆ ಗುಣಮಟ್ಟದ ಚಿಕಿತ್ಸೆ ಲಭ್ಯ: ಡಾ.ಮಂಜುನಾಥ್

Cnewstv.in / 07.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಶಿವಮೊಗ್ಗ : ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯಾರಂಭಗೊಂಡಿರುವ ಅತ್ಯಾಧುನಿಕ ಹೃದ್ರೋಗ ಚಿಕಿತ್ಸಾ ಸೌಲಭ್ಯ ಹೊಂದಿರುವ ಕ್ಯಾಥ್‌ಲ್ಯಾಬ್, ಜಯದೇವ ಹೃದ್ರೋಗ ಸಂಸ್ಥೆಯ ಗುಣಮಟ್ಟ ಹೊಂದಿದೆ ಎಂದು ಜಯದೇವ ಹೃದ್ರೊಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ತಿಳಿಸಿದರು.

ಇಲ್ಲಿನ ಕ್ಯಾಥ್‌ಲ್ಯಾಬ್‌ನಲ್ಲಿ ಇಂದು ಬೆಳಿಗ್ಗೆ ಐದು ಮಂದಿಗೆ ಆಂಜಿಯೋಗ್ರಾಮ್, ಆಂಜಿಯೋಪ್ಲಾಸ್ಟಿ ಮತ್ತು ಸ್ಟಂಟ್ ಅಳವಡಿಕೆ ಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಇಲ್ಲಿ ಅತ್ಯಾಧುನಿಕ ಉಪಕರಣಗಳು, ಮೂವರು ತಜ್ಞ ಹೃದ್ರೋಗ ತಜ್ಞರು ಮತ್ತು ತಂತ್ರಜ್ಞರಿದ್ದು, ಹೃದ್ರೋಗ ಚಿಕಿತ್ಸೆಗೆ ಬೇಕಾದ ಎಲ್ಲಾ ಸೌಲಭ್ಯಗಳು ಲಭ್ಯವಿದೆ. 50 ಹಾಸಿಗೆ ಸಾಮರ್ಥ್ಯದ ಕ್ಯಾಥ್‌ಲ್ಯಾಬ್ ಆರಂಭದೊAದಿಗೆ ಶಿವಮೊಗ್ಗ ಜಿಲ್ಲೆಯ ಮಾತ್ರವಲ್ಲದೆ ನೆರೆಯ ಜಿಲ್ಲೆಗಳ ಜನರಿಗೂ ಉತ್ತಮ ಗುಣಮಟ್ಟದ ಹೃದ್ರೋಗ ಚಿಕಿತ್ಸೆ ದೊರೆಯಲಿದೆ ಎಂದು ಅವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ 25 ರಿಂದ 35 ವರ್ಷದೊಳಗಿನವರಲ್ಲಿ ಹೃದ್ರೋಗ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಇಲ್ಲಿನ ಕ್ಯಾಥ್‌ಲ್ಯಾಬ್‌ನಲ್ಲಿ ಹೃದಯಕ್ಕೆ ಸಂಬAಧಿಸಿದAತೆ ಮಾಸ್ಟರ್ ಹೆಲ್ತ್ ತಪಾಸಣೆ ಸೌಲಭ್ಯ ಸಹ ಲಭ್ಯವಿದೆ. ಹೃದಯಾಘಾತವಾದ ಸಂದರ್ಭದಲ್ಲಿ ಆದಷ್ಟು ಬೇಗನೆ ಆಸ್ಪತ್ರೆಗೆ ಆಗಮಿಸುವುದರಿಂದ ಜೀವ ಉಳಿಸಲು ಹಾಗೂ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಸಾಧ್ಯವಿದೆ. ಜಯದೇವ ಹೃದ್ರೋಗ ಸಂಸ್ಥೆಯಿAದ ಇಲ್ಲಿನ ತಜ್ಞ ವೈದ್ಯರಿಗೆ ಎಲ್ಲಾ ರೀತಿಯ ಸಹಾಯ ಸಹಕಾರ ನೀಡಲಾಗುವುದು ಎಂದರು.

ಇದನ್ನು ಒದಿ : https://cnewstv.in/?p=5355

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*