Cnewstv.in / 12.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಶಿವಮೊಗ್ಗ : ವಿಶ್ವ ಆನೆಗಳ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗದ ಸಕ್ರೇಬೈಲು ಆನೆ ಬಿಡಾರದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಶಿವಮೊಗ್ಗದ ಗಾಜನೂರು ಬಳಿಯ ಸಕ್ರೇಬೈಲಿನಲ್ಲಿರುವ ಆನೆ ಬಿಡಾರದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ, ಆಹಾರ ನೀಡಿದರು. ಪ್ರತಿವರ್ಷ ಆನೆಗಳ ದಿನಾಚರಣೆ ಸಂದರ್ಭದಲ್ಲಿ ಆನೆಗಳ ಕ್ರೀಡಾಕೂಟ ಆಯೋಜಿಸಲಾಗುತ್ತಿತ್ತು ಅದರೆ ಕೋವಿಡ್ ಕಾರಣಕ್ಕಾಗಿ ಈ ಬಾರಿ ಆನೆಗಳ ಕ್ರೀಡಾಕೂಟವನ್ನು ಇಲಾಖೆ ರದ್ದುಗೊಳಿಸಿ, ಸರಳವಾಗಿ ಆನೆಗಳ ದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಸಿಸಿಎಫ್ ರವಿಶಂಕರ್, ಡಿಎಫ್ಓ ಐ.ಎಂ.ನಾಗರಾಜ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=5382
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv